ಬೆಂಗಳೂರು: ಪದವಿ ವ್ಯಾಸಂಗದಲ್ಲಿ ಕನಿಷ್ಠ ಶೇಕಡ 50ರಷ್ಟು ಅಂಕ ಪಡೆದಿರುವವರಿಂದ ಬಿಎಡ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕದ ವತಿಯಿಂದ 2022 -23 ನೇ ಸಾಲಿನಲ್ಲಿ ಸರ್ಕಾರಿ ಕೋಟಾದಡಿ ಲಭ್ಯವಿರುವ ಎರಡು ವರ್ಷಗಳ ಬಿಎಡ್ ಸೀಟುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪದವಿಯಲ್ಲಿ ಕನಿಷ್ಠ ಶೇಕಡ 50 ರಷ್ಟು ಅಂಕ ಪಡೆದಿರುವವರು, ಸಾಮಾಜಿಕ ವಿಜ್ಞಾನ, ವಿಜ್ಞಾನ, ಮಾನವಿಕ ವಿಷಯಗಳ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇಕಡ 50ರಷ್ಟು ಅಂಕ ಪಡೆದಿರುವವರು, ಇಂಜಿನಿಯರಿಂಗ್ ನಲ್ಲಿ ವಿಜ್ಞಾನ, ಗಣಿತದಲ್ಲಿ 55 ರಷ್ಟು ಅಂಕಗಳೊಂದಿಗೆ ಪರಿಣತಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಕೆ ಮತ್ತು ಮಾಹಿತಿಗಾಗಿ https://school education.jar.nic.in ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.