
ಬೆಂಗಳೂರು: ಸರ್ಕಾರಿ ಕಚೇರಿಯಲ್ಲಿಯೇ ಬೆಡ್ರೂಮ್ ಮಾಡಿಕೊಂಡ ಆರೋಪ ಕಾರವಾರದ ಪ್ರವಾಸೋದ್ಯಮ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜಯಂತ್ ಅವರನ್ನು ಅಮಾನತು ಮಾಡಲಾಗಿದೆ. ಇಲಾಖೆ ಕಚೇರಿಯ ಒಂದು ಕೋಣೆಯಲ್ಲಿ ಬೆಡ್ರೂಮ್ ರೀತಿ ಮಂಚ ಹಾಸಿಗೆ ಪತ್ತೆಯಾಗಿತ್ತು. ಈ ಬಗ್ಗೆ ಗಮನಕ್ಕೆ ಬಂದ ಕೂಡಲೇ ಕ್ರಮ ಕೈಗೊಂಡ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಅವರು ಅಧಿಕಾರಿಯನ್ನು ಅಮಾನತು ಮಾಡಲು ಸೂಚಿಸಿದ್ದಾರೆ.
ಇಂತಹ ಅಶಿಸ್ತು ಸಹಿಸಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದ್ದು, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಜಯಂತ್ ಅಮಾನತು ಮಾಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.