ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸುತ್ತಿದ್ದ ಬೀದಿ ಕಾಮುಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬೀದಿ ಕಾಮುಕ ಅರುಣ್ ಎಂಬಾತ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ಅಸಭ್ಯವಾಗಿ ಟಚ್ ಮಾಡಿ ಕಿರುಕುಳ ನೀಡುತ್ತಿದ್ದನು. ಬೈಕ್ ನಲ್ಲಿ ಬರುತ್ತಿದ್ದ ಕಾಮುಕ ಕಿರುಕುಳ ನೀಡುತ್ತಿದ್ದನು.ರಾಮಮೂರ್ತಿ ನಗರದಲ್ಲಿ ಈ ಘಟನೆ ನಡೆದಿದ್ದು, ದೂರು ದಾಖಲಾಗಿದೆ.
ಈ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು ಅರುಣ್ ಎಂಬಾತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.