ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇವಸ್ಥಾನದ ಸುತ್ತಮುತ್ತ ಕಾಡು ಪ್ರಾಣಿಗಳ ಕ್ಯಾಮೆರಾ ಚಿತ್ರೀಕರಣ ಹಾಗೂ ಡ್ರೋನ್ ಕ್ಯಾಮೆರಾ ಮೂಲಕ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಹತ್ತಿರ ಬರುವ ಕಾಡಾನೆ ಬಳಿ ತೆರಳಿ ಫೋಟೋ ಹಾಗೂ ಸೆಲ್ಫಿ ತೆಗೆಯುವ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು, ಈ ಹಿನ್ನೆಲೆ ಚಿತ್ರೀಕರಣ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ.
ಯಾವುದೇ ಅನಾಹುತ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಕ್ಯಾಮೆರಾ ಚಿತ್ರೀಕರಣ ಹಾಗೂ ಡ್ರೋನ್ ಮೂಲಕ ಚಿತ್ರೀಕರಣ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಹಸೀಲ್ದಾರ್ ರಮೇಶ್ಬಾಬು ತಿಳಿಸಿದ್ದಾರೆ.