ಇತ್ತೀಚಿನ ದಿನಗಳಲ್ಲಿ ಚಿಯಾ ಸೀಡ್ಸ್ ಸೂಪರ್ ಫುಡ್ ಎನಿಸಿಕೊಂಡಿದೆ. ಈ ಸಣ್ಣ ಬೀಜಗಳು ಪೌಷ್ಟಿಕಾಂಶದಲ್ಲಿ ಸಮೃದ್ಧವಾಗಿವೆ, ವಿಶೇಷವಾಗಿ ತೂಕ ಇಳಿಸಿಕೊಳ್ಳಲು ಬಯಸುವವರು ಚಿಯಾ ಸೀಡ್ಸ್ ಅನ್ನು ಹೆಚ್ಚು ಸೇವಿಸುತ್ತಾರೆ. ಆದರೆ ಇವುಗಳ ಅತಿಯಾದ ಸೇವನೆ ಕೂಡ ಹಾನಿಕಾರಕ. ಚಿಯಾ ಬೀಜಗಳ ಅಡ್ಡ ಪರಿಣಾಮಗಳ ಬಗ್ಗೆ ಅದೆಷ್ಟೋ ಜನರಿಗೆ ತಿಳಿದಿಲ್ಲ.
ಚಿಯಾ ಸೀಡ್ಸ್‌ನಲ್ಲಿ ಹೆಚ್ಚಿನ ಪ್ರಮಾಣದ ಫೈಬರ್ ಇರುತ್ತದೆ. ಇದು ಜೀರ್ಣಕ್ರಿಯೆಗೆ ಅವಶ್ಯಕ. ಆದರೆ ಇದು ಗ್ಯಾಸ್ಟ್ರಿಕ್, ಅಸಿಡಿಟಿ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ಆದ್ದರಿಂದ ಜೀರ್ಣಕಾರಿ ಸಮಸ್ಯೆಗಳನ್ನು ಹೊಂದಿರುವವರು ಚಿಯಾ ಬೀಜಗಳನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು.
ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಔಷಧಿಗಳನ್ನು ಸೇವಿಸುತ್ತಿದ್ದರೆ ಚಿಯಾ ಸೀಡ್ಸ್ ಸೇವನೆಗೂ ಮುನ್ನ ವೈದ್ಯರ ಸಲಹೆ ಪಡೆಯಬೇಕು. ಚಿಯಾ ಬೀಜಗಳು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಇದು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಆದರೆ ಈಗಾಗಲೇ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ಚಿಯಾ ಸೀಡ್ಸ್ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ತೀವ್ರವಾಗಿ ಕುಸಿಯಬಹುದು.
ಯಾವಾಗಲೂ ಸೀಮಿತ ಪ್ರಮಾಣದಲ್ಲಿ ಚಿಯಾ ಬೀಜಗಳನ್ನು ಸೇವಿಸಿ. ಆರಂಭದಲ್ಲಿ ಒಂದರಿಂದ ಎರಡು ಟೀ ಚಮಚಗಳಿಗಿಂತ ಹೆಚ್ಚು ತೆಗೆದುಕೊಳ್ಳಬೇಡಿ. ಚಿಯಾ ಬೀಜಗಳನ್ನು ಸೇವಿಸುವ ಮೊದಲು, ಅವುಗಳನ್ನು ನೀರಿನಲ್ಲಿ ಅಥವಾ ಯಾವುದೇ ದ್ರವದಲ್ಲಿ ಬೆರೆಸಿ ಚೆನ್ನಾಗಿ ನೆನೆಸಬೇಕು. ಜೀರ್ಣಕಾರಿ ಸಮಸ್ಯೆಗಳು ಅಥವಾ ಇತರ ಆರೋಗ್ಯ ಸಮಸ್ಯೆಗಳಿದ್ದಲ್ಲಿ ವೈದ್ಯರ ಸಲಹೆ ಪಡೆಯಬೇಕು.