ಕೋಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ನಾಳೆ ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್ ಮಾಡಲು ನಿರ್ಧರಿಸಲಾಗಿದೆ.
ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದು, ಒಪಿಡಿ ಸೇವೆ ಮಾತ್ರ ಬಂದ್ ಇರಲಿದೆ. ಎಮರ್ಜೆನ್ಸಿ ಸೇವೆ ಎಂದಿನಂತೆ ಸಾರ್ವಜನಿಕರಿಗೆ ಲಭ್ಯವಿರುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಭಾರತೀಯ ವೈದ್ಯಕೀಯ ಸಂಘ(ಐಎಂಎ) ಆಗಸ್ಟ್ 17ರಂದು ಬೆಳಿಗ್ಗೆ 6 ರಿಂದ ಆಗಸ್ಟ್ 18ರ ಬೆಳಿಗ್ಗೆ 6 ಗಂಟೆವರೆಗೆ 24 ಗಂಟೆಗಳ ಕಾಲ ವೈದ್ಯರು ರಾಷ್ಟ್ರವ್ಯಾಪಿ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದಾಗಿ ಘೋಷಿಸಿದೆ.ಎಲ್ಲಾ ಅಗತ್ಯ ಸೇವೆಗಳನ್ನು ನಿರ್ವಹಿಸಲಾಗುವುದು. ತುರ್ತು ಚಿಕಿತ್ಸೆ ಅಗತ್ಯವಿರುವ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುವುದು. ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಐಎಂಎ ನೀಡಿದ ರಾಷ್ಟ್ರವ್ಯಾಪಿ ಮುಷ್ಕರದ ಭಾಗವಾಗಿ ಒಪಿಡಿ ಮುಚ್ಚುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.