
ಮೈಸೂರು: ಭಿಕ್ಷುಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಅಮಾನುಷವಾಗಿ ಕೊಲೆ ಮಾಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ರಫೀಕ್, ಮಂಜುನಾಥ, ಕೃಷ್ಣ, ರೇವಣ್ಣ ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಮಹಿಳೆ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದು, ಫೆಬ್ರವರಿ 15 ರಂದು ರಾತ್ರಿ ಮೈಸೂರಿನ ಕೆಟಿ ಸ್ಟ್ರೀಟ್ ಸಮೀಪ ಆಕೆಗೆ ಮದ್ಯ ಕುಡಿಸಿದ ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆಮಾಡಿದ್ದಾರೆ.
ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಮತ್ತೊಬ್ಬನ ಬಂಧನಕ್ಕೆ ಬಲೆ ಬೀಸಲಾಗಿದೆ. ಲಷ್ಕರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.