ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದಿಂದ ರದ್ದಾಗಿದ್ದ ಬೆಳಗಾವಿ ಎಐಸಿಸಿ ಅಧಿವೇಶನದ ಸಮಾವೇಶ ಪುನರ್ ನಿಗದಿಯಾಗಿದ್ದು, ದಿನಾಂಕ ಘೋಷಣೆಯಾಗಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಡಾ.ಮನಮೋಹನ್ ಸಿಂಗ್ ವಿಧಿವಶರಾದ ಹಿನ್ನೆಲೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಹಿಂದಿನ ಡಿ.27ರ ಕಾರ್ಯಕ್ರಮ ರದ್ದಾಗಿತ್ತು. ಇದೀಗ ಜನವರಿ 21ರಂದು ಮತ್ತೆ ಎಐಸಿಸಿ ಸಮಾವೇಶ ಕಾರ್ಯಕ್ರಮ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ಡಿ.27ರಂದು ರದ್ದಾಗಿದ್ದ ಎಲ್ಲಾ ಕಾರ್ಯಕ್ರಮಗಳು ಬೆಳಗಾವಿಯಲ್ಲಿ ಜನವರಿ 21ರಂದು ನಡೆಯಲಿದ್ದು, ಅಂದು ಬೆಳಿಗ್ಗೆ ಸುವರ್ಣ ವಿಧಾನಸೌಧ ಎದುರು ಮಹಾತ್ಮಾಗಾಂಧೀಜಿ ಪ್ರತಿಮೆ ಅನಾವರಣಗೊಳಿಸಲಾಗುವುದು. ಬಳಿಕ ನಗರದ ಸಿಪಿಎಡ್ ಮೈದಾನದಲ್ಲಿ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.