ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ ನಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಐವರು ಯೋಧರು ಹುತಾತ್ಮರಾಗಿದ್ದಾರೆ. ದುರಂತದಲ್ಲಿ ಬೆಳಗಾವಿ ಜಿಲ್ಲೆಯ ಯೋಧ ಧರ್ಮರಾಜ ಅವರು ಹುತಾತ್ಮರಾಗಿದ್ದಾರೆ.
ಧರ್ಮರಾಜ ಸುಭಾಷ್ ಖೋತ ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ನಿವಾಸಿಯಾಗಿದ್ದಾರೆ.
ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶ ಬಲ್ನೋಯಿ ಮೂಲಕ ಸೇನಾ ವಾಹನ ಸಾಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ವಾಹನ ಕಂದಕಕ್ಕೆ ಉರುಳಿ ಬಿದ್ದಿದೆ. 160 ಅಡಿಯ ಕಂದಕಕ್ಕೆ ಸೇನಾ ವಾಹನ ಬಿದ್ದು ದುರಂತ ಸಂಭವಿಸಿದೆ.
ಅಪಘಾತದಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, 11 ಯೋಧರು ಗಾಯಗೊಂಡಿದ್ದಾರೆ.