ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ಕೃಷ್ಣಾ ನದಿಯ ನೀರು ನುಗ್ಗಿ ಬಿರಡಿ ಗ್ರಾಮ ಜಲಾವೃತಗೊಂಡಿದೆ. ಗ್ರಾಮದ ಸುಮಾರು 300 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಗ್ರಾಮದ ಜನ ಅಗತ್ಯವಸ್ತುಗಳನ್ನು ತೆಗೆದುಕೊಂಡು ತೊರೆಯುತ್ತಿದ್ದಾರೆ.
ಕೃಷ್ಣಾ ನದಿ ನೀರಿನ ಹರಿವು ಇನ್ನು ಕಡಿಮೆಯಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಅಥಣಿ ತಾಲೂಕಿನ ಹಲವು ಗ್ರಾಮಗಳಿಗೆ ನೀರು ನುಗ್ಗಿದ ಪರಿಣಾಮ ಹುಲಗಬಾಳ, ಇಂಗಳಗಾವ ನೀರಿನಿಂದ ಆವೃತವಾಗಿದೆ. ದರೂರ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಹಲವು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ.
ಮಳೆ ಕಡಿಮೆಯಾದರೂ ಪ್ರವಾಹ ಮಾತ್ರ ಇನ್ನೂ ತಗ್ಗಿಲ್ಲ. ರೂಗಿ ಗ್ರಾಮದ ಇಪ್ಪತ್ತಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ರೂಗಿ ಗ್ರಾಮದಲ್ಲಿ ಮನೆಗಳು ಜಲಾವೃತಗೊಂಡಿದ್ದು, ಸುಮಾರು 800 ಎಕರೆ ಕಬ್ಬು ಬೆಳೆಗಾರ ಜಲಾವೃತಗೊಂಡಿದೆ. ನೀರಿನಲ್ಲಿ ನಿಂತುಕೊಂಡು ಗ್ರಾಮದ ರೈತರು ಪ್ರತಿಭಟನೆ ನಡೆಸಿದ್ದಾರೆ. ಪರಿಹಾರ ನೀಡುವಂತೆ ರೂಗಿ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.
ಕೃಷ್ಣಾ ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಪಡಸಲಗಿ ಸೇತುವೆ ಜಗ ಜಲಾವೃತಗೊಂಡಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಸೇತುವೆ ಜಲಾವೃತಗೊಂಡು ಧಾರವಾಡ -ವಿಜಯಪುರ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ.