ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬಹಿರಂಗವಾಗಿದೆ. ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಒತ್ತುವರಿ ಬಗ್ಗೆ ಪ್ರಶ್ನಿಸಿದ್ದಕ್ಕೆ ಬಡ ಕುಟುಂಬದ ಮಹಿಳೆ ಅರೆಬೆತ್ತಲೆಗೊಳಿಸಿ ವಿಕೃತಿ ಮೆರೆಯಲಾಗಿದೆ. ಮಹಿಳೆಯ ಪುತ್ರನ ಮೇಲೆಯೂ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಐನಾಪುರದ ಸುಭಾಷ್ ದಾನೊಳ್ಳಿ, ಸುರೇಶ್, ಮಾಯಪ್ಪ ಕೃತ್ಯವೆಸಗಿದ ಆರೋಪ ಕೇಳಿ ಬಂದಿದೆ.