
ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ನಿಡಗುಂದಿ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಮೂವರು ಸವಾರರು ಸಾವನ್ನಪ್ಪಿದ್ದಾರೆ.
ಎರಡು ಬೈಕ್ ಗಳಲ್ಲಿ ತೆರಳುತ್ತಿದ್ದ ನಾಲ್ವರ ಪೈಕಿ ಮೂವರು ಮೃತಪಟ್ಟಿದ್ದಾರೆ. ಮತ್ತೊಬ್ಬ ಸವಾರನ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ರಾಯಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.