ಬೆಳಗಾವಿ: ಇಂದು ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿರುವ ಕೇಂದ್ರ ಗೃಹ, ಸಹಕಾರ ಸಚಿವ ಅಮಿತ್ ಶಾ ಸರಣಿ ಸಭೆ ನಡೆಸಲಿದ್ದಾರೆ.
ಬೆಳಗಾವಿಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ರಣತಂತ್ರ ರೂಪಿಸಲಿದ್ದಾರೆ. ಈಗಾಗಲೇ ಜಿಲ್ಲೆಯ ರಾಜಕೀಯ ಸ್ಥಿತಿ ಗತಿ ಬಗ್ಗೆ ವರದಿ ಪಡೆದುಕೊಂಡಿರುವ ಅಮಿತ್ ಶಾ ಬೆಳಗಾವಿಯಲ್ಲಿ ಬಣ ಬಡಿದಾಟಕ್ಕೆ ಬ್ರೇಕ್ ಹಾಕಲಿದ್ದಾರೆ.
ಜಾರಕಿಹೊಳಿ ಬಣ, ಸವದಿ ಬಣ, ಆರ್.ಎಸ್.ಎಸ್. ನಾಯಕರ ಬಣಗಳಾಗಿರುವ ಹಿನ್ನೆಲೆಯಲ್ಲಿ ಎಲ್ಲರೊಂದಿಗೆ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಲು ಚರ್ಚೆ ನಡೆಸಲಿದ್ದಾರೆ. ಚುನಾವಣೆ ಘೋಷಣೆಗೂ ಮುನ್ನವೇ ಬಣಗಳ ಬಡಿದಾಟಕ್ಕೆ ಬ್ರೇಕ್ ಹಾಕಲಿದ್ದಾರೆ. ಸಂಜೆ 6 ಗಂಟೆಗೆ ಆರ್.ಎಸ್.ಎಸ್. ನಾಯಕರೊಂದಿಗೆ ಅವರು ಸಭೆ ನಡೆಸಲಿದ್ದು, ನಂತರ ಜಿಲ್ಲಾ ಮುಖಂಡರು, ಪದಾಧಿಕಾರಿಗಳೊಂದಿಗೆ ಸಭೆ ನಡೆಸುವರು. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಅಮಿತ್ ಶಾ ಟಾರ್ಗೆಟ್ ನೀಡಲಿದ್ದಾರೆ ಎಂದು ಹೇಳಲಾಗಿದೆ.