alex Certify BIG NEWS: ಬೋರ್ ವೆಲ್ ಗೆ ಬಿದ್ದ ಮತ್ತೊಂದು ಮಗು, 15 ಅಡಿ ಆಳದಲ್ಲಿರುವ ಮಗು ರಕ್ಷಣೆಗೆ ಬಿರುಸಿನ ಕಾರ್ಯಾಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೋರ್ ವೆಲ್ ಗೆ ಬಿದ್ದ ಮತ್ತೊಂದು ಮಗು, 15 ಅಡಿ ಆಳದಲ್ಲಿರುವ ಮಗು ರಕ್ಷಣೆಗೆ ಬಿರುಸಿನ ಕಾರ್ಯಾಚರಣೆ

ಬೆಳಗಾವಿ: ರಾಜ್ಯದಲ್ಲಿ ಮತ್ತೊಂದು ಬೋರ್ವೆಲ್ ದುರಂತ ಸಂಭವಿಸಿದೆ. ಎರಡೂವರೆ ವರ್ಷದ ಮಗುವೊಂದು ಬೋರ್ವೆಲ್ ಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಆಲಖನೂರ ಗ್ರಾಮದ ಬಳಿ ನಡೆದಿದೆ.

ಶರತ್ ಹಸಿರೆ ಬೋರ್ವೆಲ್ ಗೆ ಬಿದ್ದ ಮಗು ಎಂದು ಹೇಳಲಾಗಿದೆ. ನಿನ್ನೆ ಸಂಜೆಯಿಂದ ಶರತ್ ನಾಪತ್ತೆಯಾಗಿದ್ದು, ಅವರ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಬಾಲಕನ ಅಪಹರಣ ಬಗ್ಗೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು ತೋಟದ ಮನೆಯಲ್ಲಿ ವಾಸವಾಗಿದ್ದ ಕುಟುಂಬದವರು ಮನೆಯಿಂದ 200 ಮೀಟರ್ ದೂರದಲ್ಲಿ ಬೋರ್ವೆಲ್ ಕೊರೆಸಿದ್ದರು. ನಿನ್ನೆ ಸಂಜೆ ಆಟವಾಡುತ್ತಿದ್ದ ಮಗು ಬೋರ್ವೆಲ್ ಗೆ ಬಿದ್ದಿದೆ. ಇವತ್ತು ಸಂಜೆ ಮಗು ಬೋರ್ವೆಲ್ ಗೆ ಬಿದ್ದಿರುವ ಮಾಹಿತಿ ಗೊತ್ತಾಗಿದೆ.

ನಿನ್ನೆ ಸಂಜೆಯಿಂದಲೇ ಮಗುವಿಗಾಗಿ ಹುಡುಕಾಟ ನಡೆಸಲಾಗಿದ್ದು, ಇವತ್ತು ಸಂಜೆ ಮಗು ಬೋರ್ವೆಲ್ ಗೆ ಬಿದ್ದಿರುವುದು ಗೊತ್ತಾಗಿದೆ. ಸುಮಾರು 15 ಅಡಿ ಆಳದಲ್ಲಿ ಮಗು ಸಿಲುಕಿರುವ ಬಗ್ಗೆ ಮಾಹಿತಿ ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಗುವಿನ ರಕ್ಷಣೆಗಾಗಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಅಗ್ನಿಶಾಮಕ ಮತ್ತು ತುರ್ತು ಸೇವೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಆದರೆ, ಕತ್ತಲಾಗಿರುವುದರಿಂದ ಕಾರ್ಯಾಚರಣೆಗೆ ಹಿನ್ನಡೆಯಾಗಿದೆ. ಬೆಳಕಿನ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆಗಳೊಂದಿಗೆ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ತಹಸೀಲ್ದಾರ್ ಕಳುಹಿಸಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ ಮಾಹಿತಿ ನೀಡಿದ್ದಾರೆ. ಮಗುವಿನ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ನಿನ್ನೆ ಸಂಜೆ ಬಾಲಕ ನಾಪತ್ತೆಯಾದ ಬಗ್ಗೆ ದೂರು ನೀಡಿದ್ದು, ಇವತ್ತು ಸಂಜೆ ಬೋರ್ವೆಲ್ ಗೆ ಬಿದ್ದಿರುವುದು ಗೊತ್ತಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಎಂದು ಡಿಸಿ ಹಿರೇಮಠ ಮಾಹಿತಿ ನೀಡಿದ್ದಾರೆ.

ಆರು ತಿಂಗಳ ಹಿಂದೆಯಷ್ಟೇ ಜಮೀನಿನಲ್ಲಿ ಬೋರ್ವೆಲ್ ಕೊರೆಸಲಾಗಿದ್ದು, ಆದರೆ ನೀರು ಸಿಗದ ಕಾರಣ ಬೋರ್ವೆಲ್ ಮುಚ್ಚದೆ ಹಾಗೆ ಬಿಡಲಾಗಿತ್ತು. ಬೋರ್ವೆಲ್ ಮುಚ್ಚದೆ ಹಾಗೆ ಬಿಟ್ಟಿದ್ದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...