alex Certify BIG NEWS: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; ಯುವಕ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; ಯುವಕ ದುರ್ಮರಣ

ಬೆಳಗಾವಿ: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಯುವಕನೊಬ್ಬ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಚುಂಚವಾಡ ಗ್ರಾಮದಲ್ಲಿ ನಡೆದಿದೆ.

15 ವರ್ಷದ ಅನಂತು ಪಾಶೆಟ್ಟಿ ಮೃತ ಯುವಕ. ಖಾನಾಪುರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಗ್ರಾಮಗಳು, ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ. ಮನೆಗಳು ಜಲಾವೃತಗೊಂಡಿದ್ದರಿಂದ ದುರಂತಗಳು ಸಂಭವಿಸುತ್ತಿವೆ.

ಯುವಕ ಅನಂತು ಮನೆಯಿಂದ ಕೊಟ್ಟಿಗೆಗೆ ದನಗಳಿಗೆ ಮೇವು ಹಾಕಲೆಂದು ಹೋಗುತ್ತಿದ್ದ ವೇಳೆ ಮನೆಯ ಗೋಡೆ ಕುಸಿದುಬಿದ್ದಿದ್ದು, ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾನೆ.

ಖಾನಾಪುರ ತಾಲೂಕಿನಾದ್ಯಂತ ಭಾರಿ ಮಳೆಗೆ ಮಹದಾಯಿ, ಮಲಪ್ರಭಾ ನದಿಗಳು ಹಾಗೂ ಕಳಸಾ ಬಂಡೂರಿ ನಾಲೆ ತುಂಬಿ ಹರಿಯುತ್ತಿದ್ದು, 30 ಗ್ರಾಮಗಳು ಜಲಾವೃತಗೊಂಡಿವೆ. ಹಳ್ಳಿಗಳ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು, ಜನರ ಬದುಕು ದುಸ್ತರವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...