
ಬೆಳಗಾವಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಖನಗಾಂವ ಗ್ರಾಮದ ಬಳಿ ಈ ಘಟನೆ ನಡೆದಿದೆ. ಸುಳೇಬಾವಿಯ ವಿಠಲ್ ಲೋಕರೆ (29) ಮೃತ ದುರ್ದೈವಿ.
ಬೈಕ್ ಗೆ ಡಿಕ್ಕಿಯಾದ ಬಳಿಕ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.