ಬೆಳಗಾವಿ: ಕಾರು ಹಾಗೂ ಬೈಕ್ ಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬೆಂಕಿ ಅವಘಡಗಳು ಹೆಚ್ಚುತ್ತಿವೆ. ನಡು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಬೆಂಕಿಯಲ್ಲಿ ಹೊತ್ತಿ ಉರಿದ ಘಟನೆ ಬೆಳಗಾವಿ ಬಳಿಯ ಜಡಶಾಪುರದಲ್ಲಿ ನಡೆದಿದೆ.
ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಕಾರು ನಿಲ್ಲಿಸಿ ಕಾರಿನಿಂದ ಇಳಿದಿದ್ದಾರೆ. ರಸ್ತೆ ಬದಿ ನಿಲ್ಲಿಸಿದ್ದ ಕಾರು ಧಗಧಗನೆ ಬೆಂಕಿಯಲ್ಲಿ ಹೊತ್ತಿ ಉರಿದಿದೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಆದರೆ ಕಾರು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.