ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಆದಿತ್ಯ ಠಾಕ್ರೆ ಅವರ ಹೇಳಿಕೆ ಅತ್ಯಂತ ಬಾಲಿಶ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಬೆಳಗಾವಿಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂ.ಇ.ಎಸ್ ನವರಾಗಲೀ, ಇನ್ಯಾರೇ ಆಗಲಿ ಈ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ ಎಂದು ಗುಡುಗಿದ್ದಾರೆ.
ಹಲವು ವರ್ಷಗಳಿಂದ ಮಹಾರಾಷ್ಟ್ರ ನಾಯಕರು ಹೀಗೆ ಹೇಳುತ್ತಾರೆ. ಇದಕ್ಕೆ ಹೆಚ್ಚು ಗಮನ ಕೊಡುವ ಅಗತ್ಯವಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದು, ಬೆಳಗಾವಿಯಲ್ಲಿ ಕನ್ನಡಿಗರು, ಮರಾಠಿಗರು ಒಂದಾಗಿದ್ದೇವೆ. ಯಾವುದೇ ಭೇದ ಭಾವ ಇಲ್ಲ, ಎಲ್ಲರೂ ಒಂದಾಗಿಯೇ ಇದ್ದೇವೆ ಎಂದು ಹೇಳಿದ್ದಾರೆ.