ಬೆಳಗಾವಿ: ಬೆಳಗಾವಿಯ ಮನೆಯೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳಗಾವಿಯ ಬಸವನಗಲ್ಲಿ ಮನೆಯಲ್ಲಿ ಜನವರಿ 28ರಂದು ಮಧ್ಯಾಹ್ನ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಭಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೀಗ ಗಾಯಾಳುಗಳಲ್ಲಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉಡುಪಿ ಮೂಲದ ಕಾಮಾಕ್ಷಿ ಭಟ್ ಹಾಗೂ ಹೇಮಂತ್ ಭಟ್ ಮೃತರು ಎಂದು ತಿಳಿದುಬಂದಿದೆ.
ಇನ್ನು ಗಾಯಾಳುಗಳಲ್ಲಿ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ಚಿಕಿತ್ಸೆ ಮುಂದುವರೆದಿದೆ.