ಬೆಳಗಾವಿ : ದಂಡು ಮಂಡಳಿ ಸಿಇಒ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿ ನಡೆದಿದ್ದು, ಇದೀಗ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಸಾವಿನ ರಹಸ್ಯ ಬಯಲಾಗಿದೆ.
ಆನಂದ ಆನ್ಲೈನ್ ಹಾಗೂ ಆಫ್ಲೈನ್ ಗೇಮ್ಗಾಗಿ ಲಕ್ಷಾಂತರ ರೂ. ಕೈ ಸಾಲ ಮಾಡಿಕೊಂಡಿದ್ದರು. ಸಾಲದಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತೀರಿಸಲಾಗದಷ್ಟು ಸಾಲ ಮಾಡಿಕೊಂಡಿದ್ದಾಗಿ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಎರಡು ದಿನಗಳ ಹಿಂದೆಯೇ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ.25ರಂದು ಬಾಗಿಲು ತಟ್ಟಿದ್ದರೂ ತೆರೆಯದೆ ಇದ್ದಾಗ ಸಿಬ್ಬಂದಿ ಆತಂಕಗೊಂಡು ಕ್ಯಾಂಪ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತಮಿಳುನಾಡಿನ ಮೂಲದವರಾದ ಕೆ.ಆನಂದ್, ಕಳೆದ ಒಂದು ವರ್ಷದಿಂದ ಬೆಳಗಾವಿಯ ದಂಡು ಮಂಡಳಿ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು . ಅಲ್ಲದೇ ದಂಡು ಮಂಡಳಿಯಲ್ಲಿ ಅಕ್ರಮ ನೇಮಕಾತಿ ಹಾಗೂ ಅಕ್ರಮ ಕಾಮಗಾರಿ ಆರೋಪ ಹಿನ್ನೆಲೆಯಲ್ಲಿ ವಾರದ ಹಿಂದೆ ದಂಡು ಮಂಡಳಿ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು.