ಬೆಳಗಾವಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಮಗಳನ್ನೇ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ. 5 ವರ್ಷದ ಮಗಳ ಕೆನ್ನೆ ಮತ್ತು ಎದೆ ಭಾಗಕ್ಕೆ ಕಚ್ಚಿ ತಂದೆ ವಿಕೃತಿ ಮೆರೆದಿದ್ದಾನೆ.
ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರ್.ಎಂ.ಪಿ. ವೈದ್ಯನಾಗಿರುವ ತಂದೆ ಬಾಲಕಿಯ ತಾಯಿ ಕೆಲಸಕ್ಕೆ ತೆರಳಿದ್ದ ವೇಳೆಯಲ್ಲಿ ಈ ರೀತಿ ವಿಕೃತಿ ಮೆರೆದಿದ್ದಾನೆ. ಆರೋಪಿ ಆರ್.ಎಂ.ಪಿ. ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಗಾಯಾಳು ಬಾಲಕಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಹೇಳಲಾಗಿದೆ.