ಬೆಳಗಾವಿ: ಇಂದಿನಿಂದ ಬೆಳಗಾವಿ -ದೆಹಲಿ ನಡುವೆ ನೇರ ವಿಮಾನ ಸಂಚಾರ ಆರಂಭವಾಗಲಿದೆ. ಈ ಮೂಲಕ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.
ಇಂಡಿಗೋ ವಿಮಾನಯಾನ ಸಂಸ್ಥೆಯ 180 ಸೀಟುಗಳ ಸಾಮರ್ಥ್ಯದ ವಿಮಾನ ಬೆಳಗಾವಿ -ದೆಹಲಿ ನಡುವೆ ಅಕ್ಟೋಬರ್ 5ರಿಂದ ಸಂಚಾರ ಆರಂಭಿಸಲಿದೆ. ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್. ತ್ಯಾಗರಾಜನ್ ಈ ಬಗ್ಗೆ ಮಾಹಿತಿ ನೀಡಿದ್ದು, ಇಂಡಿಗೋ ವಿಮಾನ ಪ್ರತಿದಿನ ಮಧ್ಯಾಹ್ನ 3:45 ಕ್ಕೆ ದೆಹಲಿಯಿಂದ ಹೊರಟು ಸಂಜೆ 6 ಗಂಟೆಗೆ ಬೆಳಗಾವಿಗೆ ಆಗಮಿಸಲಿದೆ. ಸಂಜೆ 6:35ಕ್ಕೆ ಬೆಳಗಾವಿಯಿಂದ ಹೊರಟು ರಾತ್ರಿ 9 ಗಂಟೆಗೆ ದೆಹಲಿ ತಲುಪಲಿದೆ ಎಂದು ತಿಳಿಸಿದ್ದಾರೆ.