
ಬೆಳಗಾವಿ: ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ, ಗೋಕಾಕ್ ಹೊಸ ಜಿಲ್ಲೆಗಳನ್ನಾಗಿ ರಚಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಶಾಸಕರ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜಿಸಲು ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ.
ವಿಶಾಲ ಬೆಳಗಾವಿ ಜಿಲ್ಲೆ ವಿಭಜನೆ ಬಗ್ಗೆ ಸಾರ್ವಜನಿಕರಿಂದ ತೀವ್ರ ಒತ್ತಡ ಇದ್ದು, ಸಿಎಂ ನಡೆಸಿದ ಸಭೆಯಲ್ಲಿ ಶಾಸಕರು ಕೂಡ ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕ್ ಜಿಲ್ಲೆ ರಚನೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆ ವಿಭಜನೆಗೊಂಡಲ್ಲಿ ಬೆಳಗಾವಿ, ಗೋಕಾಕ್ ಮತ್ತು ಚಿಕ್ಕೋಡಿ ಮೂರು ಜಿಲ್ಲೆಗಳಾಗಲಿವೆ ಎಂದು ತಿಳಿಸಿದ್ದಾರೆ.