
ಬೆಳಗಾವಿ ಲೋಕಸಭೆ ಉಪ ಚುನಾವಣೆ ಮತ ಎಣಿಕೆಯಲ್ಲಿ 43 ನೇ ಸುತ್ತಿನಲ್ಲಿ ಕಾಂಗ್ರೆಸ್ 4302 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.
ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮುನ್ನಡೆ ಗಳಿಸಿದ್ದಾರೆ. ಆರಂಭದಿಂದಲೂ ಒಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ಮುನ್ನಡೆ ಗಳಿಸುತ್ತಿದ್ದು, ಫಲಿತಾಂಶ ಕುತೂಹಲದತ್ತ ಸಾಗಿದೆ.
ಕಾಂಗ್ರೆಸ್ 4302 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 43ನೇ ಸುತ್ತಿನಲ್ಲಿ 2,27,087 ಮತ ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 2,22,755 ಮತಗಳಿಸಿದ್ದು, ಮತ ಎಣಿಕೆ ಮುಂದುವರೆದಿದೆ.