ಬೆಳಗಾವಿ: ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಬಿಸಿಲ ಝಳದ ನಡುವೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದ್ದು, ಅನ್ನದಾತನ ಸಹನೆಯ ಕಟ್ಟೆಯೊಡೆದಿದೆ. ಬರ ಪರಿಹಾರಕ್ಕೆ ಆಗ್ರಹಿಸಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ರೈತರು, ರೈತ ಮಹಿಳೆಯರು ಬರ ಪರಿಹಾರ ನೀಡುವಂತೆ ಹಾಗೂ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ರೈತರನ್ನು ತಡೆದಿದ್ದಾರೆ. ಇದೇ ವೇಳೆ ಪ್ರತಿಭಟನಾ ನಿರತ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಮನವಿಗಳಿಗೆ ಸ್ಪಂದಿಸುವಂತೆ ಆಗ್ರಹಿಸಿದ್ದಾರೆ.
ಚೆನ್ನಮ್ಮ ವೃತ್ತದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ರೈತರ ಮನವೊಲಿಕೆಗೆ ಪೊಲೀಸರು ಯತ್ನಿಸಿದ್ದಾರೆ.