ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ 9 ಸಾವಿರ ಮತಗಳ ಅಂತರದಿಂದ ಹಿನ್ನಡೆ ಅನುಭವಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರವಿಹಾಳ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 9ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ಮುನ್ನಡೆ ಕಾಯ್ದುಕೊಂಡಿದ್ದು ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ. ಕಳೆದ ಚುನಾವಣೆಯಲ್ಲಿ 252 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸವನಗೌಡ ಪರಾಭವಗೊಂಡಿದ್ದರು. ಆಗ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪ್ರತಾಪ್ ಗೌಡರು ಈಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
ಬಸವ ಕಲ್ಯಾಣ ಕ್ಷೇತ್ರದಲ್ಲಿ ನಾಲ್ಕನೇ ಸುತ್ತಿನಲ್ಲಿ ಬಿಜೆಪಿ 5732 ಮತಗಳ ಮುನ್ನಡೆ ಕಾಯ್ದುಕೊಂಡಿದೆ. ಶರಣುಸಲಗಾರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್ ಹಿನ್ನಡೆ ಅನುಭವಿಸಿದ್ದಾರೆ.
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 3062 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.