
ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಕೆ.ಎಸ್.ಆರ್.ಟಿ.ಸಿ ಬಸ್ ಕಂದಕ್ಟರ್ ಮೇಲೆ ಹಲ್ಲೆ ನಡೆಸಿ ಪುಂಡಾಟ ಮೆರೆದಿದ್ದ ಬೆನ್ನಲ್ಲೇ ಇದೀಗ ಮತ್ತೆ ಉದ್ಧಟತನ ಮುಂದುವರೆಸಿದ್ದಾರೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದಾರೆ.
ಬೆಳಗಾವಿಯ ಅಂಬೇವಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ನಾಗಪ್ಪ ಎಂಬುವವರ ಮೇಲೆ ಎಂಇಎಸ್ ಪುಂಡರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಾವು ಹೇಳಿದ ಕೆಲಸ ಮಾಡಿಲ್ಲ ಎಂದು ದಾಳಿ ನಡೆಸಿದ್ದಾರೆ.
ಗೋಜಗಾ ಬಳಿ ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ನಾಗಪ್ಪ ಮೇಲೆ ಹಲ್ಲೆ ನಡೆಸಲಾಗಿದೆ. ಅಂಬೇವಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚೇತನ್ ಪಟೀಲ್, ಹಾಲಿ ಅಧ್ಯಕ್ಷರ ಪುತ್ರ ವಿಕ್ರಮ್ ಯಳ್ಳೂರಕರ್ ಗ್ಯಾಂಗ್ ಹಾಗೂ ಎಂಇಎಸ್ ಪುಂಡರು ಜೊತೆಗೂಡಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.
ಗಾಯಾಳು ನಾಗಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.