ಬೆಳಗಾವಿ: ಬಳ್ಳಾರಿ ಬಳಿಕ ಬೆಳಗಾವಿ ಜಿಲ್ಲೆಯಲ್ಲಿಯೂ ಬಾಣಂತಿಯರು ಹಾಗೂ ಶಿಶುಗಳ ಸಾವು ಘಟನೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಪ್ರಕರಣದ ತನಿಖೆಗೆ ಮುಂದಾಗಿದೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬೆಳಗಾವಿಯಲ್ಲಿ ಬಾಣಂತಿಯರು ಹಾಗೂ ಶಿಶುಗಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.
ಬಳ್ಳಾರಿಯಲ್ಲಿ ಐವಿ ದ್ರಾವಣದಿಂದಾಗಿ ಬಾಣಂತಿಯರು ಸಾವನ್ನಪ್ಪಿದ್ದರು. ಬೆಳಗಾವಿಯಲ್ಲಿಯೂ ಐವಿ ದ್ರಾವಣದಿಂದ ಬಾಣಂತಿಯರ ಸಾವು ಸಂಭವಿಸಿದೆಏ? ಅಥವಾ ಬೇರೆ ಯಾವ ಕಾರಣಕ್ಕೆ ಸಾವು ಸಂಭವಿಸಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು. ಶಿಶುಗಳ ಸಾವಿಗೆ ಕಾರಣವೇನು ಎಂಬುದನ್ನೂ ಪರಿಶೀಲಿಸಲಾಗುವುದು ಎಂದರು.
ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ ಬೆನ್ನಲ್ಲೇ ಬೆಳಗಾವಿಯಲ್ಲಿ ಕಳೆದ 6 ತಿಂಗಳಲ್ಲಿ 29 ಬಾಣಂತಿಯರು ಹಾಗೂ 322 ಶಿಶಿಗಳು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಬಹಿರಗವಾಗಿದೆ.