
ಬೆಳಗಾವಿ: 17 ತಿಂಗಳ ಮಗುವಿನ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ನಡೆದಿದೆ.
ಗಾಯತ್ರಿ ವಾಗಮೋರೆ (26) 17 ತಿಂಗಳ ಕಂದಮ್ಮ ಕುಶಾಲ್ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ತಾಯಿ-ಮಗುವಿನ ಮೃತದೇಹಗಳನ್ನು ಮೇಲಕೆತ್ತಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.
ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.