alex Certify ಹೊನಲು ಬೆಳಕಿನ ಕ್ರಿಕೆಟ್ ಪಂದ್ಯದ ವೇಳೆ ಮೈದಾನದಲ್ಲೇ ಡಬಲ್ ಮರ್ಡರ್: ಚಾಕುವಿನಿಂದ ಇರಿದು ಇಬ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊನಲು ಬೆಳಕಿನ ಕ್ರಿಕೆಟ್ ಪಂದ್ಯದ ವೇಳೆ ಮೈದಾನದಲ್ಲೇ ಡಬಲ್ ಮರ್ಡರ್: ಚಾಕುವಿನಿಂದ ಇರಿದು ಇಬ್ಬರ ಹತ್ಯೆ

ಬೆಳಗಾವಿ: ಬೆಳಗಾವಿ: ತಾಲೂಕಿನ ಸಿಂದೊಳ್ಳಿ ಗ್ರಾಮದಲ್ಲಿ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಲಾಗಿದೆ. ಬಸವರಾಜ(23), ಗಿರೀಶ(34) ಹತ್ಯೆಯಾದವರು ಎಂದು ಹೇಳಲಾಗಿದೆ.

ಶಾಲಾ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿ ಮೈದಾನಕ್ಕೆ ವಾಹನ ನುಗ್ಗಿಸಿದ್ದಾನೆ. ಮೈದಾನಕ್ಕೆ ವಾಹನ  ನುಗ್ಗಿಸಿದ್ದರಿಂದ ಯುವಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ವಾಹನದಿಂದ ಕೆಳಗಿಳಿದು ಇಬ್ಬರಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ಇಬ್ಬರ ಮೃತದೇಹಗಳನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಸ್ಪತ್ರೆ ಬಳಿ ಕೆ.ಎಸ್.ಆರ್.ಪಿ. ತುಕಡಿ ನಿಯೋಜಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...