alex Certify ರುಂಡ ಕತ್ತರಿಸಿ ಯುವಕನ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರುಂಡ ಕತ್ತರಿಸಿ ಯುವಕನ ಕೊಲೆ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಕಾಡಿನಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.

ಹಾರೂಗೇರಿಯ ಅಕ್ಬರ್ ಶಬ್ಬೀರ್ ಜಮಾದಾರ(21) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಮಾರಕಾಸ್ತ್ರದಿಂದ ತಲೆ ಕತ್ತರಿಸಿ ಅಕ್ಬರ್ ನನ್ನು ಕೊಲೆ ಮಾಡಲಾಗಿದ್ದು, ಕಾಡಿನ ಬೇರೆ ಬೇರೆ ಸ್ಥಳಗಳಲ್ಲಿ ರುಂಡ ಮತ್ತು ಮುಂಡ ಪತ್ತೆಯಾಗಿವೆ.

ಗುರುವಾರವೇ ಘಟನೆ ನಡೆದಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ ಎಂದು ಶಂಕಿಸಲಾಗಿದೆ. ಕೊಲೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ತನಿಖೆ ಕೈಗೊಂಡ ಪೊಲೀಸರು ಮಹಾಂತೇಶ ಎಂಬ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದ್ದು, ಹಾರೋಗೇರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...