
ಬೆಳಗಾವಿ: ರಾಜ್ಯದ ಹಲವೆಡೆಗಳಲ್ಲಿ ಪ್ಯಾಲೆಸ್ಟೈನ್ ಧ್ವಜ ಪ್ರದರ್ಶನ, ಪ್ಯಾಲೆಸ್ಟೈನ್ ಪರ ಘೋಷಣೆ ಪ್ರಕರಣಗಳು ವರದಿಯಾಗಿವೆ. ಇದರ ಬೆನ್ನಲ್ಲೇ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ಯಾಲೆಸ್ಟೈನ್ ಬಾವುಟ ಹೋಲುವ ಶಾಮಿಯಾನ ಹಾಕಿರುವುದು ಕಂಡುಬಂದಿದೆ.
ಗಣೇಶೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಈದ್ ಮಿಲಾದ್ ಮೆರವಣಿಗೆಯನ್ನು ಸೆ.22ಕ್ಕೆ ಮುಂದೂಡಲಾಗಿದೆ. ಈದ್ ಮಿಲಾದ್ ಮೆರವಣಿಗೆಸಾಗುವ ದರ್ಬಾರ್ ಗಲ್ಲಿಯಲ್ಲಿ 200 ಮೀಟರ್ ರಸ್ತೆಯುದ್ದಕ್ಕೂ ಪ್ಯಾಲೆಸ್ಟೈನ್ ಧ್ವಜ ಹೋಲುವ ಪೆಂಡಾಲ್ ಹಾಕಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಪ್ಯಾಲೆಸ್ಟೈನ್ ಧ್ವಜ ಹೋಲುವ ಶಾಮಿಯಾನ ತೆರವುಗೊಳಿಸಿದ್ದಾರೆ.