
ಬೆಳಗಾವಿ: ಶಾಸಕ ದಂಪತಿ ಮೇಲೆ ಪೊಲೀಸರು ಹೂವಿನ ಮಳೆ ಸುರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಮಾಡಲಾಗಿದೆ.
ಶಾಸಕರ ನಿವಾಸದಲ್ಲಿ ಹುಟ್ಟುಹಬ್ಬ ಆಚರಿಸಿದ ಪೊಲೀಸ್ ಅಧಿಕಾರಿಗಳಿಗೆ ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ನೋಟಿಸ್ ಜಾರಿ ಮಾಡಿದ್ದಾರೆ. ಬೈಲಹೊಂಗಲ ಡಿವೈಎಸ್ಪಿ, ಸಿಪಿಐ ಮತ್ತು ನೇಸರಗಿ ಪೊಲೀಸ್ ಠಾಣೆಯ ಎಸ್ಐ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಬೈಲಹೊಂಗಲದಲ್ಲಿ ಕಿತ್ತೂರು ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ ದಂಪತಿಯ ಮೇಲೆ ಪುಷ್ಪವೃಷ್ಟಿ ಮಾಡಲಾಗಿತ್ತು. ವಿಡಿಯೋ ಹರಿದಾಡಿ ಪೊಲೀಸರ ಕ್ರಮಕ್ಕೆ ಖಂಡನೆ ವ್ಯಕ್ತವಾಗಿತ್ತು. ಶಾಸಕರ ಮನೆಗೆ ಹೋದ ಪೊಲೀಸ್ ಅಧಿಕಾರಿಗಳು ಪುಷ್ಪವೃಷ್ಟಿ ಮಾಡಿ ಹುಟ್ಟು ಹಬ್ಬಕ್ಕೆ ಶುಭ ಹಾರೈಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ನೋಟಿಸ್ ಜಾರಿ ಮಾಡಿದ್ದಾರೆನ್ನಲಾಗಿದೆ.