
ಬೆಳಗಾವಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ಯುವಕನೊಬ್ಬನ ಮೇಲೆ ಮತ್ತೊಬ್ಬ ಯುವಕ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದು, ಆತನನ್ನು ಬಂಧಿಸಲಾಗಿದೆ.
ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಯುವಕನನ್ನು ಡ್ರಾಪ್ ಕೊಡುವುದಾಗಿ ಹೇಳಿ ತನ್ನ ಬೈಕ್ ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಯುವಕ ಬೆದರಿಸಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಲ್ಲದೇ ಯಾರಿಗೂ ಹೇಳದಂತೆ ಜೀವಬೆದರಿಕೆ ಹಾಕಿದ್ದಾನೆ. ನೊಂದ ಯುವಕ ಅಥಣಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.