ಬೆಳಗಾವಿ: ಬೆಳಗಾವಿಯ ಬಿಮ್ಸ್ ನಜ್ ನಲ್ಲಿ ಮತ್ತೊಬ್ಬ ಬಾಣಂತಿ ಸಾವು ಕಂಡಿದ್ದಾರೆ. ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವನ್ನಪ್ಪಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ.
ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ನಿವಾಸಿಯಾಗಿರುವ ವೈಶಾಲಿಯವರನ್ನು ನಿನ್ನೆ ಹೆರಿಗೆಗಾಗಿ ಬಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಇಂದು ಬೆಳಗ್ಗೆ ವೈಶಾಲಿಗೆ ಎದೆ ನೋವು ಕಾಣಿಸಿಕೊಂಡಿದ್ದು, ವೈದ್ಯರ ನಿರ್ಲಕ್ಷದಿಂದಲೇ ವೈಶಾಲಿ ಜೀವ ಹೋಗಿದೆ. ಯಾವ ಔಷಧ ಕೊಟ್ಟಿದ್ದಾರೆ ಎನ್ನುವುದು ಗೊತ್ತಾಗಬೇಕು. ಬಾಣಂತಿ ಸಾವಿಗೆ ನ್ಯಾಯ ಸಿಗಬೇಕು. ಅಲ್ಲಿವರೆಗೂ ಮರಣೋತ್ತರ ಪರೀಕ್ಷೆಗೆ ಬಿಡುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದಿದ್ದಾರೆ. ಹಿರಿಯ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.