alex Certify BIG NEWS: ಮಾ. 20 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ; ಬೆಳಗಾವಿಯಿಂದ ಚುನಾವಣೆ ಪ್ರಚಾರ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾ. 20 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ; ಬೆಳಗಾವಿಯಿಂದ ಚುನಾವಣೆ ಪ್ರಚಾರ ಆರಂಭ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾರ್ಚ್ 20 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಅವರು ಯುವ ಕಾಂಗ್ರೆಸ್ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ,

ಭಾರತ ಜೋಡೋ ಯಾತ್ರೆಯ ನಂತರ ರಾಹುಲ್ ಗಾಂಧಿ ಇದೆ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಬೆಳಗಾವಿಯಿಂದ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಅವರು ಯುವಕರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಿಲಿದ್ದಾರೆ.

ಈಗಾಗಲೇ ಕಾಂಗ್ರೆಸ್ ನಿಂದ ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ 2000 ರೂ., ಅನ್ನಭಾಗ್ಯ ಯೋಜನೆಯಡಿ ಪ್ರತಿ ತಿಂಗಳು ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಲಾಗಿದೆ. ರಾಹುಲ್ ಗಾಂಧಿ ಅವರು ಯುವಕರಿಗೆ ಜಾರಿಗೊಳಿಸುವ ಯೋಜನೆ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...