
ಬೆಳಗಾವಿ: ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಬೆಳಗಾವಿ ಅಧಿವೇಶನದಲ್ಲಿಯೂ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸಭೆ ಬಳಿಕ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿ, ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಗಲಾಟೆ ವೇಳೆಯೇ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪ ಮಾಡಿದ್ದು, ನನ್ನ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ದೂರಿದ್ದಾರೆ.
ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ನನ್ನ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ಒಂದಲ್ಲ, ಹತ್ತು ಬಾರಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸಿ.ಟಿ.ರವಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಲಕ್ಷ್ಮೀ ಹೆಬ್ಬಾಳಕರ್ ದೂರು ನೀಡಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ನಾಯಕರು, ಸಿ.ಟಿ.ರವಿ ಅವರನ್ನು ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.