alex Certify BIG NEWS: ಬೆಳಗಾವಿ ಸುವರ್ಣಸೌಧದಲ್ಲಿ ಡಿ. 11 ರಿಂದ ಚಳಿಗಾಲದ ಅಧಿವೇಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಳಗಾವಿ ಸುವರ್ಣಸೌಧದಲ್ಲಿ ಡಿ. 11 ರಿಂದ ಚಳಿಗಾಲದ ಅಧಿವೇಶನ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ ಎರಡನೇ ವಾರದಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ.

ಸುವರ್ಣಸೌಧದಲ್ಲಿ ಡಿಸೆಂಬರ್ 11 ರಿಂದ 22 ರವರೆಗೆ 10 ದಿನಗಳ ಕಾಲ ಅಧಿವೇಶನ ನಡೆಸಲು ಪ್ರಸ್ತಾಪಿಸಲಾಗಿದ್ದು, ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಸಂಪುಟ ಸಭೆಯಲ್ಲಿ ವಿಧಾನ ಮಂಡಲ ಅಧಿವೇಶನ ವಿಷಯ ಮುಖ್ಯ ಅಜೆಂಡಾದಲ್ಲಿದೆ. ಜುಲೈನಲ್ಲಿ ಬಜೆಟ್ ಅಧಿವೇಶನ ನಡೆದಿದ್ದು, ನಿಯಮದ ಪ್ರಕಾರ ಆರು ತಿಂಗಳೊಳಗೆ ಅಧಿವೇಶನ ನಡೆಸಬೇಕಿದೆ. ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನ ದಿನಾಂಕ ಗೊತ್ತುಪಡಿಸಿ ರಾಜ್ಯಪಾಲರ ಅನುಮೋದನೆಗೆ ಶಿಫಾರಸು ಮಾಡುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...