ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಅತ್ತ ಸಂಸತ್ ನಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದರೆ ಇತ್ತ ಬೆಳಗಾವಿ ಅಧಿವೇಶನದಲ್ಲಿಯೂ ಇದೇ ವಿಚಾರ ಪ್ರತಿಧ್ವನಿಸಿದೆ.
ಸುವರ್ಣಸೌಧದಲ್ಲಿ ವಿಧಾನಸಭೆ ಕಲಾಪ ಅರಂಭವಾದ ಕೆಲವೇ ಸಮಯದಲ್ಲಿ ಕಾಂಗ್ರೆಸ್ ಸದಸ್ಯರು ಅಮಿತ್ ಶಾ ಹೇಳಿಕೆ ಖಂಡಿಸಿ ಪ್ರತಿಭಟನೆ ಆರಂಭಿಸಿದರು. ಕೇಂದ್ರ ಗೃಹ ಸಚಿವಿವ ಅಮಿತ್ ಶಾ ವಿರುದ್ಧ ಧಿಕ್ಕರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಂಬೆಡ್ಕರ್ ಭಾವಚಿತ್ರವನ್ನು ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರು ಅಮಿತ್ ಶಾ ಕ್ಷಮೆಯಾಚಿಸುವಂತೆ ಆಗ್ರಹಿಸಿದರು. ಸುಗಮ ಕಲಾಪಕ್ಕೆ ಅಡ್ಡಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಸದನದ ಕಲಾಪವನ್ನು ಕೆಲ ಕಾಲ ಮುಂದೂಡಿದರು.