ಬೆಂಗಳೂರು: ಡಿಸೆಂಬರ್ 13 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. 10 ದಿನಗಳ ಅಧಿವೇಶನಕ್ಕೆ ಅಧಿಸೂಚನೆ ಪ್ರಕಟಿಸಲಾಗಿದೆ. ಎರಡು ವರ್ಷಗಳ ನಂತರ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆಯಲಿದೆ.
ಸುವರ್ಣಸೌಧದಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಡಿ. 13 ರಿಂದ ನಡೆಸಲು ರಾಜ್ಯಸರ್ಕಾರ ಅಧಿಸೂಚನೆ ಹೊರಡಿಸಿದೆ. ಸಚಿವ ಸಂಪುಟ ಸಭೆಯಲ್ಲಿ 10 ದಿನಗಳ ಕಾಲ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ರಾಜ್ಯಪಾಲರ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಅಧಿಸೂಚನೆ ಹೊರಡಿಸಲಾಗಿದೆ.