
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಚುನಾವಣೆಯ ಹೊಸ್ತಿಲಲ್ಲಿ 10 ದಿನ ನಡೆಯುವ ರಾಜಕೀಯ ಮೇಲಾಟಕ್ಕೆ ಬೆಳಗಾವಿ ಸಜ್ಜಾಗಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಚ್ಚಾಗಿವೆ.
ತಿರುಗೇಟು ನೀಡಲು ಸರ್ಕಾರ ಕೂಡ ರೆಡಿಯಾಗಿದೆ. ಬೆಳಗಾವಿ ಗಡಿ ವಿವಾದ, ಚಿಲುಮೆ ಸಂಸ್ಥೆ ಮತದಾರರ ಮಾಹಿತಿ ಸಂಗ್ರಹ, ಪೊಲೀಸ್ ಇನ್ಸ್ಪೆಕ್ಟರ್ ನೇಮಕಾತಿ ಹಗರಣ, ಗ್ರಾಮ ಪಂಚಾಯಿತಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ವಿಳಂಬ, ಮಹದಾಯಿ, ಕೃಷ್ಣಾ ಯೋಜನೆ ಅನುಷ್ಠಾನ ವಿಳಂಬ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ವಿಪಕ್ಷಗಳ ಪ್ರಶ್ನೆಗಳಿಗೆ ಸಮರ್ಥವಾಗಿ ಉತ್ತರಿಸಲು ಸರ್ಕಾರ ಕೂಡ ಸಜ್ಜಾಗಿದೆ.