
ಬೆಂಗಳೂರು: ಡಿಸೆಂಬರ್ 4 ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಮಂಡಲ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕಳೆದ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಚರ್ಚಿಸಿ ದಿನಾಂಕ ನಿಗದಿ ಕುರಿತಾಗಿ ಮುಖ್ಯಮಂತ್ರಿಗಳಿಗೆ ಅಧಿಕಾರ ವಹಿಸಲಾಗಿತ್ತು. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕುರಿತಾಗಿ ಚರ್ಚೆ ನಡೆಸಲಾಗಿದ್ದು, ಡಿಸೆಂಬರ್ 4 ರಿಂದ 10 ದಿನಗಳ ಕಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ.
ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್, ಡಿಸೆಂಬರ್ 4 ರಿಂದ 15 ರವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಆ ಭಾಗದ ಜನರ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.