ಬೆಳಗಾವಿ: ಇಂದಿನಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಸಮರ್ಥ ವಿಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ. ಜೊತೆಗೆ ಬಡ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಿ ಸಿಎಂ ಸಿದ್ದರಾಮಯ್ಯ ಅವರಿಂದ ಉತ್ತರ ಪಡೆಯುತ್ತೇವೆ ಎಂದರು.
ಇದೇ ವೇಳೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ವಿಚಾರವಾಗಿ ಮಾತನಾಡದ ವಿಜಯೇಂದ್ರ, ಕರ್ನಾಟಕದಲ್ಲಿ ಪೊಳ್ಳು ಗ್ಯಾರಂಟಿ ಭರವಸೆಗಳನ್ನು ನೀಡಿದ್ದ ಹಾಗೆ ಇಂಡಿಯಾ ಮೈತ್ರಿಕೂಟ ದೇಶದ ನಾನಾಕಡೆಗಳಲ್ಲಿ ಗ್ಯಾರಂಟಿ ಮಂತ್ರ ಪಠಿಸಿತು. ಆದರೆ ಜನರು ಅವರ ಟೊಳ್ಳು ಭರವಸೆಗಳನ್ನು ನಂಬಲು ತಯಾರಿಲ್ಲ. ಜನರಿಗೆ ಬೇಕಿರುವುದು ದೇಶದ ರಕ್ಷಣೆ ಮತ್ತು ಗ್ಯಾರಂಟಿ. ಅದನ್ನು ಪ್ರಧಾನಿ ನರೇಂದ್ರ ಮೋದಿ ಮಾತ್ರ ಮಾಡಬಲ್ಲರು ಎಂಬುದು ತಿಳಿದಿದೆ ಎಂದರು.