ಬೆಳಗಾವಿ: ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ನಾಳೆ ರಾಮಲಲ್ಲಾ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಬೃಹತ್ ಶೋಭಾಯಾತ್ರೆ ಆಯೋಜಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾ ಮಾಡಿದೆ.
ಶೋಭಾಯಾತ್ರೆಗೆ ಅನುಮತಿ ನಿರಾಕರಿಸಿರುವ ಹೈಕೋರ್ಟ್ ನ ಧಾರವಡ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿದೆ. ರಮಾಕಾಂತ್ ಕೊಂಡುಸ್ಕರ್ ಎನ್ನುವವರು ಅರ್ಜಿ ಸಲ್ಲಿಸಿದ್ದರು.
ಶ್ರೀರಾಮ ಸೇನೆ ಹಿಂದೂಸ್ತಾನ್ ವತಿಯಿಂದ ನಾಳೆ ಬೆಳಗಾವಿಯಲ್ಲಿ ಮಧ್ಯಾಹ್ನದಿಂದ ರಾತ್ರಿ 9ಗಂಟೆಯವರೆಗೆ ಬೃಹತ್ ಶೋಭಾಯಾತ್ರೆ ಆಯೋಜಿಸಲಾಗಿತ್ತು. ನಗರದ ಸಂಬಾಜಿ ವೃತ್ತದಿಂದ ಶಹಾಪುರದವರೆಗೂ ಶೋಭಾಯಾತ್ರೆ ಸಾಗಲಿತ್ತು. ಆದರೆ ಕಾನೂನು ಸುವಸ್ಥೆ ದೃಷ್ಠಿಯಿಂದ ಯಾತ್ರೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ್ ಕೊಂಡುಸ್ಕರ್ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಭಾಗೀಯ ಪೀಠ ಕೂಡ ಅರ್ಜಿ ವಜಾಗೊಳಿಸಿದೆ.