alex Certify ವ್ಯಕ್ತಿ ಮೇಲೆ ಚಿರತೆ ದಾಳಿ: ವಿಷಯ ತಿಳಿದು ಆಘಾತದಿಂದ ತಾಯಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವ್ಯಕ್ತಿ ಮೇಲೆ ಚಿರತೆ ದಾಳಿ: ವಿಷಯ ತಿಳಿದು ಆಘಾತದಿಂದ ತಾಯಿ ಸಾವು

ಬೆಳಗಾವಿ: ಪುತ್ರನ ಮೇಲೆ ಚಿರತೆ ದಾಳಿ ಮಾಡಿದೆ ಎಂಬ ವಿಷಯ ತಿಳಿದು ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಕೆ.ಹೆಚ್. ಕನಗಾವಿ ಗ್ರಾಮದಲ್ಲಿ ನಡೆದಿದೆ.

ಶಾಂತಾ ಮೀರಜಕರ್(65) ಮೃತಪಟ್ಟವರು. ಅವರ ಪುತ್ರ ಸಿದ್ದರಾಯಿ ಮೀರಜಕರ್ ಅವರ ಮೇಲೆ ಚಿರತೆ ದಾಳಿ ಮಾಡಿದ್ದು, ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಮಗನ ಮೇಲೆ ಚಿರತೆ ದಾಳಿ ಮಾಡಿದೆ ಎಂಬ ವಿಷಯ ತಿಳಿದ ತಾಯಿ ಶಾಂತಾ ಅವರು ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...