
ಬೆಳಗಾವಿ ತಾಲೂಕು ಹಿಂಡಲಗಾ ಗ್ರಾಮದ ಬಳಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಅವರ ಮೇಲೆ ವೈರಿಂಗ್ ಮಾಡಲಾಗಿದೆ.
ಶ್ರೀರಾಮಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಕಾರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಫೈರಿಂಗ್ ಮಾಡಲಾಗಿದೆ. ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ.
ರವಿ ಅವರ ಗದ್ದಕ್ಕೆ ಬುಲೆಟ್ ತಗುಲಿ, ಕಾರ್ ಚಾಲಕನ ಕೈಗೆ ತಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.