ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಅಲ್ಲದೇ ಮೂಕ ಪ್ರೇಕ್ಷಕರಾಗಿದ್ದ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಸಂತ್ರಸ್ತೆಗೆ ನೀಡಿ ಎಂದು ಹೈಕೋರ್ಟ್ ಸೂಚನೆ ನೀಡಿದೆ.
ನ್ಯಾ ಸೀಜೆ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾ ಕೃಷ್ಣ ದೀಕ್ಷಿತರಿದ್ದ ಪೀಠ ಪಿಐಎಲ್ ಅರ್ಜಿ ವಿಚಾರಣೆಯನ್ನು ನಡೆಸಿ ಈ ಸೂಚನೆಯನ್ನು ನೀಡಿದೆ. ಮಹಿಳೆ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಸುಮ್ಮನೆ ನಿಂತ ಜನರ ವರ್ತನೆಯನ್ನು ಹೈಕೋರ್ಟ್ ಖಂಡಿಸಿದೆ. ಮೂಕ ಪ್ರೇಕ್ಷಕರಾದ ಗ್ರಾಮದ ಜನರಿಂದ ದಂಡ ಸಂಗ್ರಹಿಸಿ ಸಂತ್ರಸ್ಥೆಗೆ ನೀಡಲು ಹೈಕೋರ್ಟ್ ಸೂಚನೆ ನೀಡಿದೆ. ಬ್ರಿಟಿಷರು ಪುಂಡ ಕಂದಾಯ ಎಂಬ ತೆರಿಗೆ ವಿಧಿಸುತ್ತಿದ್ದರು, .ವಿಲಿಯಂ ಬೆಂಟಿಕ್ ಕಾಲದಲ್ಲಿ ಇಂತಹ ನೀತಿ ಇತ್ತು ಎಂದು ಬೆಳಗಾವಿ ಪ್ರಕರಣದ ಬಗ್ಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಏನಿದು ಘಟನೆ
ಪ್ರೀತಿಸಿದ್ದ ಯುವತಿ ಜೊತೆ ಓಡಿ ಹೋಗಿದ್ದ ಯುವಕನ ತಾಯಿಯನ್ನೇ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿತ್ತು.ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿ ಪೋಷಕರು ಯುವಕನ ತಾಯಿಯನ್ನು ಹೊರಕ್ಕೆ ಎಳೆದುಕೊಂಡು ಬಂದು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದರು.
ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 9 ಕ್ಕೇರಿಕೆಯಾಗಿದೆ. ವಂಟಮೂರಿ ಗ್ರಾಮದಲ್ಲಿ ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿ ಪೋಷಕರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.