alex Certify ಬೆಳಗಾವಿಯಲ್ಲಿ ಘೋರ ದುರಂತ : ಹಾಸ್ಟೆಲ್ ಮೇಲಿನ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿಯಲ್ಲಿ ಘೋರ ದುರಂತ : ಹಾಸ್ಟೆಲ್ ಮೇಲಿನ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಹಾಸ್ಟೆಲ್ ಮೇಲಿನ ವಿದ್ಯುತ್ ತಂತಿ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದಲ್ಲಿರುವ ಹಾಸ್ಟೆಲ್ ನಲ್ಲಿ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಗಣೇಶ ಪೂಜಾರ್ (15) ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಗೆ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಆರೋಪಿಸಿದ್ದಾರೆ.

ಗಣೇಶ ಪೂಜಾರ್ ಹಾಸ್ಟೆಲ್ ಮಹಡಿ ಮೇಲೆ ಹಾಕಿದ್ದ ಬಟ್ಟೆ ತೆಗೆಯಲು ಹೋಗಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದು, ಹಲವು ಬಾರಿ ಹೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ರೂ ತಂತಿಯನ್ನು ಸರಿಪಡಿಸಲಲಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಯರಗಟ್ಟಿ ಉಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...