ಬೆಳಗಾವಿ: ಸಾರಿಗೆ ನೌಕರ ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ.
ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಸಾರಿಗೆ ನೌಕರ ಶಿವಕುಮಾರ ನೀಲಗಾರ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.