ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿ ಇದೆ. ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಅಧಿವೇಶನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಡಿ.9ರಿಂದ 20ರವರೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಯಲಿದ್ದು, ಅಧಿವೇಶನ ಹಿನ್ನೆಲೆಯಲ್ಲಿ ಭದ್ರತೆಗಾಗಿ 6000ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. 6 ಎಸ್ ಪಿಗಳು, 10 ಹೆಚ್ಚುವರಿ ಎಸ್ ಪಿಗಳು, 38 ಡಿವೈ ಎಸ್ ಪಿಗಳು, 100 ಪೊಲೀಸ್ ಇನ್ಸ್ ಪೆಕ್ಟರ್ ಗಳು, 235 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು ಅಧಿವೇಶನದ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
30 ಡ್ರೋನ್ ಕ್ಯಾಮರಾ ಬಳಸಲಾಗುತ್ತಿದೆ. 80ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಪ್ರತಿಭಟನೆಗಳು ನಡೆಯುವ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ.
ಬೆಳಗಾವಿ ನಗರ ಬಂದೋಬಸ್ತ್, ಟ್ರಾಫಿಕ್ ಬಂದೋಬಸ್ತ್ ಸೇರಿ 20 ವಲಯಗಳನ್ನು ರಚಿಸಲಾಗಿದೆ. ಪ್ರತಿ ವಲಯಕ್ಕೂ ಓರ್ವ ಮೇಲ್ವಿಚರಕ ವೀಕ್ಷಕರನ್ನು ನೇಮಿಸಲಾಗಿದೆ ಮುಖ್ಯ ವಲಯದಲ್ಲಿ ಓರ್ವ ಎಸ್ ಪಿ ರ್ಯಾಂಕ್ ಅಧಿಕಾರಿ ಇರುತ್ತಾರೆ. ಸುವರ್ಣ ವಿಧಾನಸೌಧ ವಲಯದಲ್ಲಿ ಒಬ್ಬರು ಎಸ್ ಪಿ, ಡಿಎಸ್ ಪಿ ಸೇರಿ ಮತ್ತಿತರ ಅಧಿಕಾರಿಗಳು ಇರಲಿದ್ದಾರೆ ಎಂದು ಮಾಹಿತಿ ನೀಡಿದರು.